Breaking News

ಪ್ರತಿಭಟನೆ ನಿರತ ರೈತರಿಂದ ಟ್ರ್ಯಾಕ್ಟರ್ ಜಾಥ ನಾಳೆಗೆ ಮುಂದೂಡಿಕೆ

Spread the love

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಜ.06 ರಂದು ನಿಗದಿಪಡಿಸಿದ್ದ ಟ್ರ್ಯಾಕ್ಟರ್ ಜಾಥವನ್ನು ಜ.07 ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಸಿಂಘು ಗಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರೈತರ ಒಕ್ಕೂಟಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಟ್ರ್ಯಾಕ್ಟರ್ ಜಾಥಾವನ್ನು ಜ.07 ಕ್ಕೆ ಮುಂದೂಡಿರುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ತಮ್ಮ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಜ.07 ರಂದು ಟ್ರ್ಯಾಕ್ಟರ್ ಗಳ ಮೂಲಕ ಎಲ್ಲಾ ಪ್ರತಿಭಟನಾ ಸ್ಥಳಗಳಿಂದ ಕುಂಡ್ಲಿ ಮನೇಸರ್ ಪಲ್ವಾಲ್ ಬಳಿ ಜಮಾವಣೆಯಾಗಲಿರುವುದಾಗಿ ರೈತರ ಒಕ್ಕೂಟ ತಿಳಿಸಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ