Breaking News

ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆಂದು, ಯುವಕರ ಗುಂಪೊಂದು ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ

Spread the love

ಮಡಿಕೇರಿ: ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆಂದು, ಯುವಕರ ಗುಂಪೊಂದು ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಬೈಲುಕುಪ್ಪೆಯಲ್ಲಿ ನಡೆದಿದೆ.ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದರೂ ವೈಷಮ್ಯ ಮುಂದುವರಿದಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದಿದ್ದಾರೆ. ಹೀಗಾಗಿ 12 ಯುವಕರು ಸೇರಿ ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಕ್ಯಾಂಟೀನ್ ಮಾಲೀಕ ಅಸ್ಕರ್ ಅಲಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಜನವರಿ 3 ರಂದು ಕೊಡಗು ಜಿಲ್ಲೆ ಕುಶಾಲನಗರ ಸಮೀಪದ, ಬೈಲುಕುಪ್ಪೆಯ ಕ್ಯಾಂಟೀನ್‍ಗೆ ಏಕಾಏಕಿ ಬಂದು ನುಗ್ಗಿದ 12 ಜನ ಯುವಕರ ಗುಂಪು, ಗಲಾಟೆ ಮಾಡಿದೆ. ಈ ವೇಳೆ ಕ್ಯಾಂಟೀನ್ ಮಾಲೀಕ ಅಸ್ಕರ್ ಅಲಿ ಅವರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ