ಬೆಳಗಾವಿ: ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಾಡುತ್ತೇನೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ನಗರದಲ್ಲಿ ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.
ಸಂಕ್ರಾತಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು, ಈ ಬಗ್ಗೆ ನಾನು ಏನನ್ನು ಹೇಳಲಾರೆ. ಸಿಎಂ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.
Laxmi News 24×7