Breaking News

ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್

Spread the love

ಬೆಂಗಳೂರು: ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರ. ಮಹಾಮಾರಿ ಕೊರೋನಾಗೆ ಲಸಿಕೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈಗ ಅದನ್ನು ಹೇಗೆ ಜನರಿಗೆ ಮುಟ್ಟಿಸಬೇಕು ಅನ್ನೋದರ ಬಗ್ಗೆ ಗಂಭೀರ ಚಿಂತನೆಗಳು ನಡೆದು ಡ್ರೈ ರನ್ ಕೂಡ ನಡೆಯುತ್ತಿದೆ. ಇಂದು ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್ ರಾಜ್ಯದಲ್ಲಿ ನಡೆಯಲಿದೆ. ಜನವರಿ 2ರಂದು ಬೆಂಗಳೂರು ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಈಗ ಇಡೀ ರಾಜ್ಯದಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸೋಕೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 263 ಕಡೆ ಇಂದು ಅಂದ್ರೆ ಜನವರಿ 8ರಂದು ಡ್ರೈ ರನ್ ನಡೆಯಲಿದೆ. ಎಲ್ಲಾ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಡ್ರೈ ರನ್ ನಡೆಯಲಿದೆ. ಮೊದಲಿನಂತೆ, ಪ್ರತೀ ಕೇಂದ್ರದಲ್ಲೂ‌ 25 ಸ್ವಯಂಸೇವಕರ ಮೇಲೆ ಪ್ರಯೋಗದ ಡ್ರೈರನ್ ಆಗಲಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವ ಸುಧಾಕರ್, ಜನವರಿ 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌ ದಾವಣಗೆರೆ: ಬನ್ನಿಕೋಡು ಗ್ರಾಮದಲ್ಲಿ ಸೆರೆಯಾಗಿದ್ದ ಶಂಕಿತ ಉಗ್ರ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸ್ಕೆಚ್ ಹಾಕಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ದಾವಣಗೆರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿನ್ನೆ(ಜೂನ್‌ 23) ಯಶಸ್ವಿಯಾಗಿ ಬಂಧಿಸಿದ್ದರು. ಉತ್ತರ ಪ್ರದೇಶ ಮೂಲದ ಸುಹೇಲ್ (20) ಬಂಧಿತ ಆರೋಪಿ. ಈತ ಹರಿಹರದ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಈತನ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ದೇಶದಲ್ಲಿ ದೊಡ್ಡ ಮಟ್ಟದ ಸಮಾಜಘಾತಕ ಚಟುವಟಿಕೆಗಳನ್ನು ಈತನ ಗ್ಯಾಂಗ್ ಯೋಜನೆ ರೂಪಿಸಿದ್ದ ವಿಚಾರ ಲಭ್ಯವಾಗಿದೆ. ನಾನು ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ಬಯಸಿದ್ದೆ ಎಂದು ಆತ ಪೊಲೀಸರ ಮುಂದೆ ಒಪ್ಪಿಕೊಂಡಿರುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಮೂಲತಃ ಉತ್ತರ ಪ್ರದೇಶದವನಾದ ಸುಹೇಲ್, ಕಳೆದ 15 ದಿನಗಳ ಹಿಂದೆಯಷ್ಟೇ ಹರಿಹರಕ್ಕೆ ಬಂದಿದ್ದನು. ಯಾರೂ ತನ್ನನ್ನು ಶಂಕಿಸಬಾರದು ಎಂಬ ಕಾರಣಕ್ಕೆ ಹರಿಹರದ ಪಕ್ಕದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಾ ಬನ್ನಿಕೋಡು ಗ್ರಾಮದಲ್ಲಿ ತಂಗಿದ್ದನು. ಜೂನ್ 3 ರಂದು ದಾವಣಗೆರೆಯಲ್ಲಿ ಬಂಧನಕ್ಕೊಳಗಾಗಿದ್ದ ಇತರ ಕೆಲವು ಶಂಕಿತ ಉಗ್ರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಈ ಸುಹೇಲ್ ಹೆಸರು ಬೆಳಕಿಗೆ ಬಂದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ. ವಾಟ್ಸಪ್‌ನಲ್ಲಿ ಪಾಕ್ ನಂಟು ಸುಹೇಲ್‌ನ ಮೊಬೈಲ್ ಡೇಟಾವನ್ನು ರಿಟ್ರೀವ್ ಮಾಡಿದಾಗ ಆತನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪಾಕಿಸ್ತಾನದ ಲಿಂಕ್‌ಗಳು ಪತ್ತೆಯಾಗಿವೆ. ಈತ ಇನ್‌ಸ್ಟಾಗ್ರಾಮ್ ಚಾಟ್‌ಗಳ ಮೂಲಕ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದನು. ಈತನ ಮೊಬೈಲ್‌ನಲ್ಲಿ ಪಾಕಿಸ್ತಾನದ ಕೋಡ್ (+92) ಇರುವ ನಂಬರ್ ಒಂದನ್ನು ರಾಣಾ ಭಾಯ್ ಎಂದು ಸೇವ್ ಮಾಡಿಕೊಳ್ಳಲಾಗಿತ್ತು. ಇದರ ಜೊತೆಗೆ ದೇಶವಿರೋಧಿ ಚಟುವಟಿಕೆ ನಡೆಸುವ MEMON & JUTTU- 333 ಹಾಗೂ RANABHAI 333’ಎಂಬ ಗ್ರೂಪ್‌ಗಳಲ್ಲಿ ಈತ ಸಕ್ರಿಯ ಸದಸ್ಯನಾಗಿದ್ದನು. ಅಷ್ಟೇ ಅಲ್ಲದೇ ಉಗ್ರರನ್ನು ಹೋಲುವ ರೀತಿಯಲ್ಲಿ, ಕೈಯಲ್ಲಿ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಈತ ತೆಗೆಸಿಕೊಂಡಿದ್ದ ಫೋಟೋಗಳು ಮೊಬೈಲ್‌ನಲ್ಲಿ ಲಭ್ಯವಾಗಿವೆ. ನಿನ್ನೆ ಈತನನ್ನು ಬಂಧಿಸಿದ ಬಳಿಕ ತೀವ್ರ ವಿಚಾರಣೆಗಾಗಿ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ತದನಂತರ ಹೆಚ್ಚಿನ ತನಿಖೆ ಮತ್ತು ಪ್ರಕರಣದ ದಾಖಲಾತಿಗಾಗಿ ಇಂದು ಮತ್ತೆ ಹರಿಹರ ಗ್ರಾಮಾಂತರ ಠಾಣೆಗೆ ವಾಪಸ್ ಕರೆತರಲಾಗಿದ್ದು, ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ಮುಂದುವರಿದಿದೆ. ಶಂಕಿತ ಉಗ್ರನ ಬಂಧನದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಕೆಲಸ ಹುಡುಕಿಕೊಂಡು ದಾವಣಗೆರೆಗೆ ಬಂದಿದ್ದನು. ಪ್ರಾಥಮಿಕ ತನಿಖೆಯ ಪ್ರಕಾರ ಆತ ಚಾಟ್ ಮೂಲಕ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ಸಂಪರ್ಕದಲ್ಲಿದ್ದ ಎಂಬುದು ಗೊತ್ತಾಗಿದೆ. ಆತನ ಮೊಬೈಲ್‌ನಲ್ಲಿ ಕೆಲವು ಆಕ್ಷೇಪಾರ್ಹ ವಿಚಾರಗಳು ಪತ್ತೆಯಾಗಿವೆ. ಸದ್ಯ ಆರೋಪಿ ಪೊಲೀಸರ ಕಸ್ಟಡಿಯಲ್ಲಿದ್ದು, ತನಿಖೆ ಮುಂದುವರಿದಿದೆ. ತನಿಖೆಯ ನಂತರ ಮತ್ತಷ್ಟು ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ತಿಳಿಸಿದ್ದಾರೆ.

Spread the loveದಾವಣಗೆರೆ: ಬನ್ನಿಕೋಡು ಗ್ರಾಮದಲ್ಲಿ ಸೆರೆಯಾಗಿದ್ದ ಶಂಕಿತ ಉಗ್ರ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸ್ಕೆಚ್ ಹಾಕಿದ್ದ ಸ್ಫೋಟಕ ವಿಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ