Breaking News

ಕೃಷಿ ಕಾಯ್ದೆಗೆ ವಿರೋಧ: ಜ.15ರಂದು ಕಾಂಗ್ರೆಸ್‌ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

Spread the love

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ಜ. 15ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

’15ರಂದು ರಾಜಭವನಗಳಿಗೆ ಮುತ್ತಿಗೆ ಹಾಕಲಾಗುವುದು. ಮುಂಬರುವ ಬಜೆಟ್‌ ಅಧಿವೇಶನದ ವೇಳೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸಲು ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೇವಾಲಾ ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ರಾಜ್ಯಗಳ ಉಸ್ತುವಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ