Breaking News

‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ’: ರಾಹುಲ್ ಗಾಂಧಿ

Spread the love

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಪಟ್ಟು ಸಡಿಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ, ಬಂಡವಾಳಶಾಹಿಗಳನ್ನು ತೊಳಗಿಸಿ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.ಈ ಸಂಬಂಧ ಸಂಸತ್ತಿನಲ್ಲಿ 2015 ಎಪ್ರಿಲ್‌ನಲ್ಲಿ ಮಾಡಿರುವ ಭಾಷಣದ ವಿಡಿಯೊ ತುಣುಕನ್ನು ಬಿಡುಗಡೆ ಮಾಡಿರುವ ರಾಹುಲ್ ಗಾಂಧಿ, ‘ರೈತರು ದೇಶದ ಶಕ್ತಿ’ ಎಂಬುದನ್ನು ಪ್ರತಿಪಾದಿಸಿದರು.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು, ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಸರ್ಕಾರದೊಂದಿಗೆ ನಡೆಸಿದ ಹಲವು ಸುತ್ತಿನ ಮಾತುಕತೆಯು ವಿಫಲಗೊಂಡಿದೆ.

ಮಳೆ ಹಾಗೂ ಕೊರೆಯುವ ಚಳಿ ನಡುವೆಯೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು, ಜನವರಿ 26 ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ.

 

https://www.facebook.com/105350550949710/videos/826201244624033/

 


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ