Breaking News

ಬುಲಾವ ಮಾಡಿದ್ದು ಸಚಿವ ಸಂಪುಟ ವಿಸ್ತರಣೆ ಅಂತಾ ಆದ್ರೆ ಹೇಳಿದ್ದು ಕುರ್ಚಿ ಖಾಲಿ ಮಾಡಿ ಅಂತಾ

Spread the love

ನವದಹಲಿ – ಸಚಿವಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನವದೆಹಲಿಗೆ ಕರೆಸಿಕೊಂಡಿದೆ ಎನ್ನುವ ನಿರೀಕ್ಷೆ ಬಹುತೇಕ ಹುಸಿಯಾಗಿದೆ.

ಬದಲಾಗಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನೇ ಬದಲಾಯಿಸುವ ಪ್ರಸ್ತಾಪವನ್ನು ಅಮಿತ್ ಶಾ ಯಡಿಯೂರಪ್ಪ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಯಾರಾಗಲಿದ್ದಾರೆ 2021ಕ್ಕೆ ಕರ್ನಾಟಕದ ಸಿಎಂ?

ಬೆಳಗ್ಗೆ ನವದೆಹಲಿಗೆ ಧಾವಿಸಿದ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಕೂಡ ಇದ್ದರು. ಆದರೆ ಮಾತುಕತೆ ವೇಳೆ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಮಾತುಕತೆಯ ವೇಳೆ ಹೊರಗಿಡಲಾಗಿತ್ತು ಎನ್ನಲಾಗಿದೆ.

ಸಿಎಂ ಖುರ್ಚಿ ಬಿಡುವಂತೆ ಯಡಿಯೂರಪ್ಪ ಅವರಿಗೆ ಡಿಸೆಂಬರ್ ಅಂತ್ಯದವರೆಗೆ ಹೈಕಮಾಂಡ್ ಗಡುವು ನೀಡಿತ್ತು ಎನ್ನುವ ಸುದ್ದಿ ಈ ಮೊದಲ ಹರಡಿತ್ತು. ಇದೀಗ ವಾರದೊಳಗೆ ಯಡಿಯೂರಪ್ಪ ಅವರನ್ನು ಬದಲಿಸಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ