ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Laxmi News 24×7