ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರನ್ನು ಬಂಡವಾಳ ಶಾಹಿಗಳ ಕೈಗೊಂಬೆಯಂತೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ರೈತರಿಗೆ ಮಾರಕವಾಗಿರುವ ಈ ಕಾಯ್ದೆ ಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮಹಾತ್ಮಾ ಗಾಂಧಿ ನರೇಗಾಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. ಕೂಲಿಕಾರರು ನರೇಗಾ ಕಾಮಗಾರಿಗಳಿಗೆ ತೆರಳುತ್ತಿರುವದಿಂದ ಕೂಲಿ ಕೆಲಸಕ್ಕೆ ಆಳು ಸಿಗದಂತಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ಎಂದು ಆರೋಪಿಸಿದ ರೈತರು, ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅಪ್ಪಾಸಾಬ ದೇಸಾಯಿ, ಸುಭಾಷ ದಾಯಗೊಂಡೆ, ರಾಮಚಂದ್ರ ಫಡಕೆ, ಶಿವಾಜಿ ಬುರಲಿ, ಮಹಾದೇವಿ ಮನೋಹರ ಪಾಟೀಲ್, ಬಸವ್ವ ಗುರುಪಾದ ಬೈರಿ, ಲಕ್ಷ್ಮೀ ಶಂಕರ ಅಂಕಿ, ಪುಷ್ಪಾ ಲಕ್ಷ್ಮಣ ಮಜಗಾಂವಿ, ಸನೀತಾ ಅಪ್ಪಚ್ಚು ನಿರ್ವಾಣಿ ಸೇರಿದಂತೆ ಮುಂತಾದವರು ಇದ್ದರು.