Breaking News

ತಾನೇ ಸಾಕಿದ್ದ ಹಸುವಿನಿಂದ ಬಾಲಕ ಪ್ರಾಣಬಿಟ್ಟಿದ್ದಾನೆ

Spread the love

ಮಂಡ್ಯ: ತಾನೇ ಸಾಕಿದ್ದ ಹಸು ಮುಂದೊಂದ್ದು ದಿನ ತನ್ನನ್ನೇ ಕೊಲ್ಲಬಹುದು ಎಂದು ಆ ಬಾಲಕ ಕನಸ್ಸಿನಲ್ಲೂ ಯೋಚಿಸಿರಲಿಲ್ಲ. ಆದರೆ ವಿಧಿಲಿಖಿತ ಅದೇ ಆಗಿತ್ತು. ಆ ಹಸುವಿನಿಂದಲೇ ಬಾಲಕ ಪ್ರಾಣಬಿಟ್ಟಿದ್ದಾನೆ.

ಇಂತಹದ್ದೊಂದು ಮನಕಲಕುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಯತ್ತಂಬಾಡಿ ಗ್ರಾಮದಲ್ಲಿ ಸಂಭವಿಸಿದ್ದು, 13 ವರ್ಷದ ಬಾಲಕ ಮಾದೇಶ್ (13) ಬಲಿಯಾಗಿದ್ದಾನೆ. ಸೋಮವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ಹೋಗಿದ್ದ ಮಾದೇಶ್​ಗೆ ಕೊಂಬಿನಿಂದ ತಿವಿದಿದೆ. ಮಾರಣಾಂತಿಕವಾಗಿ ಗಾಯಗೊಂಡ ಬಾಲಕ ತೀವ್ರ ರಕ್ತಸ್ರಾವವಾಗಿ ಅಸುನೀಗಿದ್ದಾನೆ.ಮನೆಯಲ್ಲೇ ಸಾಕಿದ್ದ ಹಸುಗೆ ಮನೆಮಗ ಬಲಿಯಾಗಿರುವುದು ಇಡೀ ಕುಟುಂಬವನ್ನು ಶೋಕದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ