Breaking News
Home / ರಾಜ್ಯ / ಮೂರನೇ ಬಾರಿಗೆ ಕತ್ತಿ ಕೈ ಹಿಡಿದ ಸಿಎಂ ಬಿಎಸ್​ವೈ; ಶಾಸಕ ಉಮೇಶ್ ಕತ್ತಿಗೆ ಮಂತ್ರಿಗಿರಿ ಪಕ್ಕಾ?

ಮೂರನೇ ಬಾರಿಗೆ ಕತ್ತಿ ಕೈ ಹಿಡಿದ ಸಿಎಂ ಬಿಎಸ್​ವೈ; ಶಾಸಕ ಉಮೇಶ್ ಕತ್ತಿಗೆ ಮಂತ್ರಿಗಿರಿ ಪಕ್ಕಾ?

Spread the love

ಬೆಂಗಳೂರು; ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ನಾಳೆ ವಿಸ್ತರಣೆಯಾಗಲಿದೆ. ಈಗಾಗಲೇ ನೂತನ ಸಚಿವ ಪಟ್ಟಿಯನ್ನು ಸಿಎಂ ಬಿಎಸ್​ವೈ ರಾಜ್ಯಪಾಲರಿಗೆ ಕಳುಹಿಸಿದ್ದು, ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ ಎಂಬುದು ಈಗಲೂ ನಿಗೂಢವಾಗಿದೆ. ಏತನ್ಮಧ್ಯೆ, ಕಳೆದ ಎರಡು ಬಾರಿ ಸಂಪುಟ ವಿಸ್ತರಣೆಯಾದಾಗ ಅವಕಾಶ ವಂಚಿತರಾಗಿದ್ದ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರಿಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎಂದು ಹೇಳಲಾಗುತ್ತಿದೆ.

ನಾಳೆ ಸಂಜೆ 4ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಉಮೇಶ್ ಕತ್ತಿಗೆ ಸಿಎಂ ಬುಲಾವ್ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಕತ್ತಿ ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದಾರೆ. ಇಂದು ಸಂಜೆ ಸಿಎಂ ಬಿಎಸ್​ವೈ ಅವರನ್ನು ಕತ್ತಿ ಭೇಟಿಯಾಗಲಿದ್ದಾರೆ.ಕಳೆದ ಬಾರಿ ಸಂಪುಟ ವಿಸ್ತರಣೆಯಾದಾಗ ಉಮೇಶ್ ಕತ್ತಿ ಹೆಸರು ಕೈಬಿಡಲಾಗಿತ್ತು. ಇದರಿಂದ ಕತ್ತಿ ಸಹಜವಾಗಿಯೇ ಬೇಸರಿಸಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಮಾಧ್ಯಮಗಳಿಗೆ ತಿಳಿಸಿದ್ದರು. ಈ ಬಾರಿಯ ವಿಸ್ತರಣೆಯಲ್ಲಿ ಕತ್ತಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಮನಸ್ಸು ಮಾಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ