Breaking News

ನ್ಯಾಯಮೂರ್ತಿಗಳ ವಿರುದ್ಧ ಆರೋಪ ಅರ್ಜಿದಾರನಿಗೆ ₹1 ಲಕ್ಷ ದಂಡ

Spread the love

ಬೆಂಗಳೂರು: ಮೈಸೂರಿನ ಸೋಸಲೆ ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧವೇ ಆರೋಪಗಳನ್ನು ಮಾಡಿದ್ದ ಅರ್ಜಿದಾರ ವಿ. ಗುರುರಾಜ್‌ ಎಂಬುವವರಿಗೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠ ₹ 1 ಲಕ್ಷ ದಂಡ ವಿಧಿಸಿದೆ.

ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗುರುರಾಜ್‌ ಕೂಡ ಒಬ್ಬ ಅರ್ಜಿದಾರ. ತಮ್ಮ ಅರ್ಜಿಯನ್ನು ಕರ್ನಾಟಕದ ಹೊರಗೆ ವಕೀಲಿ ವೃತ್ತಿ ನಡೆಸಿರುವ ನ್ಯಾಯಮೂರ್ತಿಗಳೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯೂ ಆಗಿದ್ದ ಸುಪ್ರೀಂಕೋರ್ಟ್‌ನ ಒಬ್ಬ ನಿವೃತ್ತ ನ್ಯಾಯಮೂರ್ತಿ ಕರ್ನಾಟಕ ಮೂಲದ ನ್ಯಾಯಮೂರ್ತಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬ ಆರೋಪವನ್ನೂ ಮಾಡಿದ್ದರು.

ನ್ಯಾಯಮೂರ್ತಿಗಳ ವಿರುದ್ಧ ಆರೋಪ ಮಾಡಿದ್ದ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರ ಪರ ವಕೀಲರಿಗೆ ಮಂಗಳವಾರ ಅನುಮತಿ ನೀಡಿದ ವಿಭಾಗೀಯ ಪೀಠ, ₹ 1 ಲಕ್ಷ ದಂಡ ವಿಧಿಸಿತು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದಂಡ ಪಾವತಿಸುವಂತೆ ಸೂಚಿಸಿತು. ನಗರದ ಬೀದಿಗಳಲ್ಲಿ ಆಟಿಕೆ ಮತ್ತಿತರ ವಸ್ತುಗಳನ್ನು ಮಾರುತ್ತಿರುವ ಮಕ್ಕಳಿಗೆ ನೆರವು ನೀಡುವುದಕ್ಕೆ ಈ ಮೊತ್ತವನ್ನು ಬಳಸುವಂತೆಯೂ ನಿರ್ದೇಶನ ನೀಡಿತು.

‘ಇದು ನ್ಯಾಯಾಲಯವನ್ನೂ ಆರೋಪದ ಸುಳಿಗೆ ಸಿಲುಕಿಸುವ ಪ್ರಯತ್ನ. ಅರ್ಜಿದಾರರ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅವಕಾಶವಿದೆ’ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿತು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ