ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, 7 ಶಾಸಕರಿಗೆ ಮಾತ್ರ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇದ್ದಾರೆ ಎಂದರು.
ಇನ್ನು ಒಂದು ಸ್ಥಾನವನ್ನು ಖಾಲಿ ಬಿಡಲಾಗಿದೆ. ಹೈಕಮಾಂಡ್ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಅವರು ಬಂದ ಬಳಿಕ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Laxmi News 24×7