Breaking News

ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದು

Spread the love

ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಪಂಚಮಸಾಲಿ ಲಿಂಗಾಯಿತ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬಸವಕಲ್ಯಾಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗುತ್ತಿದ್ದಂತೆಯೇ ಪಾದಪಾತ್ರೆ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಪ್ರತಿಕ್ರಿಯೆ ನೀಡಿರುವ ಮುರುಗೇಶ್ ನಿರಾಣಿ, ಸಚಿವ ಸ್ಥಾನದ ಪಟಿಯಲ್ಲಿ ನಮ್ಮ ಹೆಸರಿದೆ ಎಂದು ಗೊತ್ತಾಯಿತು. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಎಂ ಯಡಿಯೂರಪ್ಪನವರಿಗೆ ಧನ್ಯವಾದ ಅರ್ಪಿಸುತ್ತೇನೆ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದಿದ್ದಾರೆ.

ಇನ್ನು ಪಂಚಮಸಾಲಿ ಪಾದಯಾತ್ರೆ ಕೈಬಿಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಸ್ವಾಮೀಜಿ ಬಳಿ ನಾನು ಮಾತನಾಡಿದ್ದೇನೆ. ಸಿಎಂ ಬಿ.ಎಸ್.ವೈ ಕೂಡ ಪಾದಯಾತ್ರೆ ಕೈಬಿಡುವಂತೆ ಮನವಿ ಮಾಡಿದ್ದರು. ಹೀಗಾಗಿ ಪಾದಯಾತ್ರೆ ಹಿಂಪಡೆಯುವುದಾಗಿ ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ