Breaking News

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕ ಸಿದ್ದು ಸವದಿ ಅಸಮಾಧಾನ ಸ್ಪೋಟ

Spread the love

ಬೆಂಗಳೂರು : ರಾಜ್ಯ ಸಚಿವ ಸಂಪುಟದ ಬೆನ್ನಲ್ಲೇ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದು, ಇದೀಗ ಶಾಸಕ ಸಿದ್ದು ಸವದಿ ಕೂಡ ಇದೀಗ ಸಿಡಿದೆದ್ದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿರುವ ಸಿದ್ದು ಸವದಿ, ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿ ಪ್ರಾಣಹೋದರು ಪಕ್ಷಕ್ಕೆ ದ್ರೋಹ ಮಾಡದೇ ಪಕ್ಷಕ್ಕಾಗಿ ಮತ್ತು ಪಕ್ಷದ ಬಲವರ್ಧನೆಗಾಗಿ ಹಗಲು ರಾತ್ರಿ ದುಡಿದು ಯಾವುದೇ ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವ ಪಕ್ಷದ ಆದೇಶಗಳನ್ನು ಮನಸಾ ಪೂರ್ವಕ ಪಾಲನೆ ಮಾಡುವ ಮತ್ತು ಪಕ್ಷಕ್ಕಾಗಿ ಯಾವತ್ಯಾಗಕ್ಕೂ ಸಿದ್ಧರಿರುವವರಿಗೆ ಯಾವುದೇ ಸ್ಥಾನಮಾನ ಕೊಡದೆ ಕೇವಲ #ಹೌದಪ್ಪ ಗಳಿಗೆ ಈ ದಿನಗಳಲ್ಲಿ ಪಟ್ಟ ಕಟ್ಟುವ, ಚಾಳಿ ಬೆಳೆಯುತ್ತಿದ್ದನು ನೋಡಿ ನೋವಾಗುತ್ತಿದೆ.

ಇದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು, ಹೊತ್ತು ಬಂದಂತೆ ಕೊಡೆ ಹಿಡಿಯುವವರಿಗೆ ಮಣೆ ಹಾಕುವುದನ್ನು ಬಿಟ್ಟು ಸ್ವಲ್ಪ ಪಕ್ಷ ನಿಷ್ಟರನ್ನು ಸಹಿತ ಪರಿಗಣಿಸಿದರೆ ನಿಮಗೂ ಗೌರವ ಮತ್ತು ಪಕ್ಷಕ್ಕೂ ಒಳ್ಳೆಯದಾಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ