Breaking News

ತೆರಿಗೆದಾರರಿಗೆ ಸಿಹಿ ಸುದ್ದಿ : ಕೇಂದ್ರ ಸರ್ಕಾರದಿಂದ ಆದಾಯ ತೆರಿಗೆ ರಿಟರ್ನ್ (ಐಟಿಆರ್) ವಿನಾಯಿತಿ ಮಿತಿ ಹೆಚ್ಚಳ?

Spread the love

ನವದೆಹಲಿ: 2021ರ ಕೇಂದ್ರ ಬಜೆಟ್ ಗೆ ಇನ್ನು ಕೆಲವೇ ದಿನಗಳು ಬಾಕಿ ಯಿದ್ದು, ಮುಂದಿನ ತಿಂಗಳು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಪ್ರಸ್ತಾವನೆಗಳಿಂದ ಮಧ್ಯಮ ವರ್ಗದವರಿಗೆ ಹಲವು ಗಿಫ್ಟ್‌ಗಳು ಕಾದಿದೆ ಎನ್ನಲಾಗಿದೆ. 2020-21ರ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ವು ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ , ವೈಯಕ್ತಿಕ ಆದಾಯ ತೆರಿಗೆ ಪಾವತಿದಾರರ ಮೂಲ ತೆರಿಗೆ ವಿನಾಯಿತಿ ಮಿತಿಯನ್ನು 2.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸುವ ಸಾಧ್ಯತೆ ಇದೆ.

ವಿವಿಗಳಿಗೆ ಮೂಲ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಪ್ರಸ್ತಾವ ವಿವಿಧ ಕಡೆಗಳಿಂದ ಬಂದಿದ್ದು, ತೆರಿಗೆ ಸಾಧಕ ಬಾಧಕಗಳನ್ನು ಪರಿಶೀಲಿಸಿದ ಬಳಿಕ ಕಂದಾಯ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷದ ಅಯವ್ಯಯದಲ್ಲಿ ಸರ್ಕಾರವು ಹೊಸ ಮತ್ತು ಸರಳೀಕೃತ ವೈಯಕ್ತಿಕ ತೆರಿಗೆ ವ್ಯವಸ್ಥೆಯನ್ನು ಘೋಷಿಸಿತ್ತು. ಜೊತೆಗೆ ಪ್ರಸ್ತುತ ಆದಾಯ ತೆರಿಗೆ ವ್ಯವಸ್ಥೆ ಹಾಗೂ ಪರ್ಯಾಯ ಹೊಸ ವ್ಯವಸ್ಥೆಯ ನಡುವೆ ಯಾವುದಾದರೂ ಒಂದನ್ನು ಆಯ್ಕೆ ಮಾಡುವ ಅವಕಾಶವನ್ನು ತೆರಿಗೆದಾರರಿಗೆ ನೀಡಿತ್ತು. ಆದರೆ ಆದಾಯ ತೆರಿಗೆಯ ಮೂಲ ಸ್ಕ್ಯಾಬ್ ನಲ್ಲಿ ಬದಲಾವಣೆ ಮಾಡಿರಲಿಲ್ಲ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ