Breaking News

ಯಡಿಯೂರಪ್ಪ ಒಬ್ಬ ದುರ್ಬಲ ಸಿಎಂ : ಸಿದ್ದರಾಮಯ್ಯ

Spread the love

ಮೈಸೂರು,ಜ.14- ಸಿಡಿಯನ್ನು ಮುಂದಿಟ್ಟುಕೊಂಡು ಬ್ಲಾಕ್‍ಮೇಲ್ ಮಾಡುತ್ತಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ದುರ್ಬಲರಾಗಿರುತ್ತಾರೋ ಅವರನ್ನೇ ಬ್ಲಾಕ್‍ಮೇಲ್ ಮಾಡಲು ಸಾಧ್ಯ. ಯಡಿಯೂರಪ್ಪನವರು ದುರ್ಬಲರಾಗಿದ್ದಾರೆ. ಹಾಗಾಗಿ ಬ್ಲಾಕ್‍ಮೇಲ್ ಮಾಡಲಾಗುತ್ತಿದೆ. ಬ್ಲಾಕ್‍ಮೇಲ್ ಮಾಡುವವರ ವಿರುದ್ಧ ದೂರು ನೀಡಬೇಕು. ಕ್ರಿಮಿನಲ್ ಕೇಸು ಹಾಕಿಸಬೇಕು. ಜತೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.ಸಿಡಿ ಮುಂದಿಟ್ಟುಕೊಂಡು ಬ್ಲಾಕ್‍ಮೇಲ್ ಮಾಡುತ್ತಿರುವವರು ಬಿಜೆಪಿಯ ಸದಸ್ಯರಾಗಿದ್ದಾರೆ. ಒಂದು ವೇಳೆ ನಾವೇನಾದರು ಮಾತನಾಡಿದರೆ ರಾಜಕೀಯಕ್ಕಾಗಿ ಪ್ರತಿಪಕ್ಷ ಆರೋಪ ಮಾಡುತ್ತಿದೆ ಎಂದು ಹೇಳುತ್ತಿದ್ದರು. ಈಗ ಅವರದೇ ಪಕ್ಷದ ಸದಸ್ಯರು ಹೇಳುತ್ತಿರುವುದರಿಂದ ಬಹುಶಃ ಅದರಲ್ಲಿ ಸತ್ಯ ಇದ್ದರೂ ಇರಬಹುದು ಎಂದರು.

ಬಿಜೆಪಿ ಸರ್ಕಾರ ಹಗರಣದಲ್ಲಿ ಮುಳುಗಿಹೋಗಿದೆ. ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡುತ್ತಿಲ್ಲ. ಈ ಹಿಂದೆ ನಮ್ಮ ಸರ್ಕಾರ ಜಾರಿ ಮಾಡಿದ ಯೋಜನೆಗಳನ್ನು ಕೂಡ ಸ್ಥಗಿತ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಷಯ ಚರ್ಚೆಯಲ್ಲಿ ಇಲ್ಲ ಎಂದಾದರೆ ಸಂಪುಟ ವಿಸ್ತರಣೆ ಮಾಡಲು ಇಷ್ಟು ದಿನ ವಿಳಂಬವಾಗಿದ್ದೇಕೆ ? ವರಿಷ್ಠರ ಕೈ-ಕಾಲು ಹಿಡಿದು ಅನುಮತಿಪಡೆದು ಸಂಪುಟ ವಿಸ್ತರಣೆ ಮಾಡಿದ್ದಾರೆ. ಅದರಲ್ಲೂ ಒಬ್ಬ ಸಚಿವರನ್ನು ಕೈ ಬಿಟ್ಟಿದ್ದಾರೆ. ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿ ಆಪರೇಷನ್ ಕಮಲದಿಂದ ಬಿಜೆಪಿ ಸೇರಿದ ನಾಗೇಶ್ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ