Breaking News

ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು.

Spread the love

ನವದೆಹಲಿ: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು. ಅಲ್ಲಿಯ ವರೆಗೆ ಕಾಂಗ್ರೆಸ್ ಪಟ್ಟು ಸಡಿಲಿಸುವುದಿಲ್ಲ. ಈ ಕಾಯ್ದೆಗಳು ರೈತರಿಗೆ ಯಾವುದೇ ನೆರವನ್ನುಂಟು ಮಾಡುವುದಿಲ್ಲ. ರೈತರನ್ನು ಮುಗಿಸಲೆಂದೇ ಕೃಷಿ ಕಾಯ್ದೆ ಜಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಜಾರಿ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷವು ಶುಕ್ರವಾರ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸುತ್ತಿದೆ. ಅಲ್ಲದೆ ಎಲ್ಲ ರಾಜ್ಯ ಘಟಕಗಳ ರಾಜಭವನದಲ್ಲಿ ಧರಣಿಯನ್ನು ಹಮ್ಮಿಕೊಂಡಿದೆ. ಇದು ‘ಸ್ಪೀಕ್ ಅಪ್ ಫಾರ್ ಕಿಸಾನ್ ಅಧಿಕಾರ್’ (ರೈತರ ಅಧಿಕಾರಕ್ಕಾಗಿ ಧ್ವನಿಯೆತ್ತಿ) ಅಭಿಯಾನದ ಭಾಗವಾಗಿದೆ.

ಕಾಂಗ್ರೆಸ್ ಧರಣಿ ಮುನ್ನಡೆಸುತ್ತಿರುವ ರಾಹುಲ್ ಗಾಂಧಿ, ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವಂತೆ ಒತ್ತಾಯಿಸಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ