ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ.
ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್, ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಆದೇಶದ ಮೇರೆಗೆ ಈವರೆಗೆ ನನಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಆದರೆ ಈಗ ನಾನು ಸಿಎಂ ಯಡಿಯೂರಪ್ಪ ವಿರುದ್ಧ ಮಾತನಾಡಿದ್ದಕ್ಕಾಗಿ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡಲು ಯಡಿಯೂರಪ್ಪ ಹೊರಟಿದ್ದಾರೆ.
ಹೀಗಾಗಿ ಪೊಲಿಸ್ ಭದ್ರತೆಯನ್ನು ಏಕಾಏಕಿ ಹಿಂಪಡೆಯಲಾಗಿದೆ. ತಮ್ಮ ಹಳೆಯ ಚಾಳಿ, ವಿಕೃತ ಮನಸ್ಸನ್ನು ಇದು ಬಿಂಬಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದರಿಂದ ಜನಪರ ನನ್ನ ಹೋರಾಟವಾಗಲಿ, ಹಿಂದೂ ಸಂಘಟನೆಗಳ ಪರ ನನ್ನ ಕೆಲಸವನ್ನಾಗಲಿ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಹೋರಾಟ ನಿರಂತರ ಹೊರತು ಸರ್ಕಾರವನ್ನು ನಂಬಿ ನಾನು ಹೋರಾಟ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.
Laxmi News 24×7