Breaking News

ಅಮಿತ್ ಶಾ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ

Spread the love

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ‌ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಷಾ ಪರಿಹಾರ ನೀಡಲಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಎರಡು ದಿನಗಳ ಪ್ರವಾಸದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಪಕ್ಷದ ಸಂಘಟನೆಗೆ, ರಾಜ್ಯ ರಾಜಕೀಯದ ಬಗ್ಗೆ ಗಮನ ಹರಿಸಲಿದ್ದಾರೆ. ಅಲ್ಲದೆ, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಅಮಿತ್ ಶಾ ಭೇಟಿ ನಡುವೆ ನಾಳೆ ಸಂಜೆ 7.30ಕ್ಕೆ ನಗರದ ಖಾಸಗಿ ಹೋಟೆಲ್​​​​ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಆರ್.ಅಶೋಕ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಅರವಿಂದ ಲಿಂಬಾವಳಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ