ಸಂಕೇಶ್ವರ : ರಾಜ್ಯದ ಜನರ ಬಗೆಗೆ ಅಪಾರ ಕಾಳಜಿ ಹೊಂದಿರುವ ಸಚಿವ ಉಮೇಶ ಕತ್ತಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.
ಇಲ್ಲಿಗೆ ಸಮೀಪದ ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಸಚಿವ ಉಮೇಶ ಕತ್ತಿ ಅವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಎಂಟು ಬಾರಿ ಹುಕ್ಕೇರಿ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಕತ್ತಿ ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿದ್ದು, ರಾಜಕೀಯ, ಸಾಮಾಜಿಕ ವ್ಯವಸ್ಥೆ ಹೆಚ್ಚಿನ ಅನುಭವ ಹೊಂದಿದ್ದು, ಅವರ ಸಾಮರ್ಥ್ಯಕ್ಕನುಸಾರವಾಗಿ ಭವಿಷ್ಯದಲ್ಲಿ ಉನ್ನತ ಸ್ಥಾನಮಾನ ದೊರೆಯಲಿ ಎಂದು ಆಶೀರ್ವದಿಸಿದರು.
ಬರುವ ದಿನಮಾನಗಳಲ್ಲಿ ಸರಕಾರದ ಯೋಜನೆಗಳ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಸಚಿವ ಉಮೇಶ ಕತ್ತಿ ಮಾತನಾಡಿ, ನಿಡಸೋಸಿ ಶ್ರೀಮಠದ ಶ್ರೀಗಳ ಆಶೀರ್ವಾದ ಹಾಗೂ ನನ್ನನ್ನು ಎಂಟು ಬಾರಿ ವಿಧಾನಸಭೆಗೆ ಆಯ್ಕೆಗೊಳಿಸಿ ಕ್ಷೇತ್ರದ ಅಭಿವೃದ್ಧಿ ಜವಾಬ್ದಾರಿ ವಹಿಸಿಕೊಟ್ಟಿದ್ದಾರೆ. ಈ ಸಚಿವ ಸ್ಥಾನದ ಶ್ರೇಯಸ್ಸು ಸಲ್ಲಬೇಕಿರುವುದು ಕ್ಷೇತ್ರದ ಜನರಿಗೆ.
ಬಿಜೆಪಿ ಹೈಕಮಾಂಡ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನಗೆ ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುವ ಜೊತೆಗೆ ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದರು.
ಜಿಪಂ ಸದಸ್ಯರಾದ ನಿಖಿಲ್ ಕತ್ತಿ, ಪವನ ಕತ್ತಿ, ಯುವ ಧುರೀಣ ಪೃಥ್ವಿ ಕತ್ತಿ, ದುಂಡಪ್ಪ ಹೆದ್ದೂರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Laxmi News 24×7