Breaking News

ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ: ಅಮಿತ್ ಶಾ

Spread the love

ಶಿವಮೊಗ್ಗ: ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬುಳ್ಳಾಪುರದಲ್ಲಿ 97ನೇ ಆರ್ ಎಎಫ್ ಬೆಟಾಲಿಯನ್ ತರಬೇತಿ ಘಟಕ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅಮಿತ್ ಶಾ, ಸಿಆರ್ ಪಿ ಎಫ್ ನಮ್ಮ ಶಕ್ತಿ. ದೇಶದ ಮೂಲೆ ಮೂಲೆಗೂ ಸಿಆರ್ ಪಿ ಎಫ್ ಹೋಗುತ್ತದೆ ಎಂದರು.

ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ನಾವು ಗೆದ್ದಿದ್ದೇವೆ. ವಿಶ್ವದಲ್ಲೇ ಅತ್ಯುತ್ತಮವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಕೊರಿನಾ ನಿಭಾಯಿಸಿದ್ದೇವೆ. ಮೋದಿ ದೂರದೃಷ್ಟಿಯಿಂದಾಗಿ ಭಾರತ ಕೊರೊನಾ ವಿಚಾರದಲ್ಲಿ ಯಶಸ್ಸು ಕಂಡಿದೆ ಎಂದು ಶ್ಲಾಘಿಸಿದರು.

ಕೊರೊನಾ ವಿಚಾರದಲ್ಲೂ ವಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ಇದನ್ನು ನಾವು ಸಹಿಸುವುದಿಲ್ಲ ಎಂದು ಗುಡುಗಿದರು.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ