Breaking News

ಐಆರ್‌ಬಿ ಆಡಳಿತ ಭವನ ಉದ್ಘಾಟನೆಗೆ ಕ್ಷಣಗಣನೆ

Spread the love

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿರುವ ವರ್ಚ್ಯುವೆಲ್ ವೇದಿಕೆ ಮೂಲಕ, ವಿಜಯಪುರ ಸಮೀಪದ ಅರಕೇರಿಯಲ್ಲಿ ನಿರ್ಮಿಸಲಾಗಿರುವ ಇಂಡಿಯನ್ ರಿಸರ್ವ್ ಬಟಾಲಿಯನ್ನ (ಐಆರ್‌ಬಿ) ಆಡಳಿತ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಐಆರ್‌ಬಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. 2010ರಲ್ಲಿ ಆರಂಭವಾದ ರಾಜ್ಯದ ಎರಡನೇ ಐಆರ್ ಬಿ ಸೆಂಟರ್‌ ಇದಾಗಿದ್ದು, 100 ಎಕರೆ ವಿಸ್ತೀರ್ಣ ಹೊಂದಿದೆ. ಸದ್ಯ 746 ಸಿಬ್ಬದಿ ಇದ್ದಾರೆ. ಸಿಬ್ಬಂದಿಗೆ 455 ಕ್ವಾಟ್ರಸ್ ಇವೆ. ₹ 9.62 ಕೋಟಿ ಅನುದಾನದಲ್ಲಿ ನೂತನ ಆಡಳಿತ ಭವನ ನಿರ್ಮಾಣವಾಗಿದೆ. ಸಭಾಂಗಣ, ಕಮಾಡೆಂಟ್ ಕಚೇರಿ ಒಳಗೊಂಡಿದೆ


Spread the love

About Laxminews 24x7

Check Also

ರಾಜ್ಯದಲ್ಲಿ ಭೀಕರ ಬರ 46 ಸಾವಿರ ಕೋಟಿ ನಷ್ಟ, ಈ ವರ್ಷ ಜಿಎಸ್‌ಟಿ ಸಂಗ್ರಹ ಕುಸಿತ: ಜಿ. ಪರಮೇಶ್ವರ್‌

Spread the loveಬೆಂಗಳೂರು: ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ