*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*
ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 1 ವರ್ಷದಿಂದಲೂ ಬಿಜೆಪಿಯವರು ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡುತ್ತಾನೆ ಬಂದಿದ್ದು, ಅವರಿಗೇನು ಹೊಸದಲ್ಲ. ಈಗಾಗಲೇ ಅನೇಕ ನಾಯಕರು, ಕಾಂಗ್ರೆಸ್ ಪಕ್ಷದ ನಾಯಕರು, ನಾನು ಸಹ ಕೋವಿಡ್ ಮಾರ್ಗಸೂಚಿ ಹಿಂಪಡೆಯಿರಿ ಅಥವಾ ಕಾರ್ಯಕ್ರಮ ರದ್ದು ಪಡೆಸಿ ಎಂದು ಆದ್ರೆ ಉದಾಶೀನ ತೋರಿಸಿ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇದೆ. ಆಡಳಿತ, ಕಾನೂನು ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದ್ದಾರೆ. ಕೋವಿಡ್ ಹಿನ್ನೆಲೆ ಹೆಚ್ಚಿನ ಜನರು ಸೇರಬಾರದು ಎಂದು ನಿಯಮ ಇದೆ. ಆದ್ರೆ ನಿಯಮವನ್ನು ಲೆಕ್ಕಿಸದೆ ಬಿಜೆಪಿ ನಾಯಕರು ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ವಾಕ್ ದಾಳಿ ನಡೆಸಿದರು.
Laxmi News 24×7