Breaking News

ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ

Spread the love

ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸ್ವಾಗತಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶೇಷ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ