ಬೆಳಗಾವಿ : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಗಡಿ ವಿಚಾರ ಬಂದಾಗ ನಮ್ಮ ಪಕ್ಷದ ವತಿಯಿಂದ ಯಾವುದೇ ಮೃದು ಧೋರಣೆ ತೋರಿಲ್ಲ. ತೋರಿಸುವುದು ಇಲ್ಲ ಎಂದು ಹೇಳಿದರು.