Breaking News

ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !

Spread the love

ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ.

ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ.

ಇದೀಗ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಇನ್ನಿಬ್ಬರು ಹೊಸ ಕಾರ್ಯಾಧ್ಯಕ್ಷರಾಗುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಕೈ ಪಾಳಯ ಯೋಜಿಸಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ