Breaking News

ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರೈಲ್ವೆ ಹಳಿಮೇಲೆ ಎಸೆದು ಹೋದ ಆರೋಪಿಗಳು!

Spread the love

ಇಂದೋರ್: ಮಧ್ಯಪ್ರದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ಕಾಲೇಜು ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ರೈಲ್ವೆ ಹಳಿ ಮೇಲೆ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಂದೋರ್ ನ 19 ವರ್ಷದ ಕಾಲೇಜು ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಚೂರಿಯಿಂದ ಇರಿದು ರೈಲ್ವೆ ಹಳಿ ಮೇಲೆ ಎಸೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಬದುಕುಳಿದಿರುವುದಾಗಿ ವರದಿ ತಿಳಿಸಿದೆ.

ವ ದೂರಿನ ಪ್ರಕಾರ, ಯುವತಿಯನ್ನು ಮಾಜಿ ಪ್ರಿಯತಮ ನಂದಿಗ್ರಾಮದ ಫ್ಲ್ಯಾಟ್ ವೊಂದಕ್ಕೆ ಕರೆತಂದ ಸಂದರ್ಭದಲ್ಲಿ ಆತ ಗೆಳೆಯರ ಜತೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದೆ.

ನಂತರ ಆಕೆಗೆ ಚೂರಿಯಿಂದ ಇರಿದು ಗೋಣಿಚೀಲದಲ್ಲಿ ಕಟ್ಟಿ ಭಾಗಿರತ್ ಪುರದ ರೈಲ್ವೆ ಹಳಿ ಮೇಲೆ ಎಸೆದು ಹೋಗಿದ್ದರು. ನಂತರ ಯುವತಿ ಹೇಗೋ ಗೋಣಿಚೀಲ ಹರಿದುಕೊಂಡು ಹೊರಬಂದ ನಂತರ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿ ವಿವರಿಸಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ 14 ವರ್ಷದ ಬಾಲಕಿ ಬೇತುಲ್ ಗ್ರಾಮದಲ್ಲಿ ಗದ್ದೆಯ ಮೋಟಾರ್ ಸ್ವಿಚ್ ಆಫ್ ಮಾಡಲು ಹೋದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಜೀವಂತವಾಗಿ ಹೂತು ಹಾಕಲು ಯತ್ನಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯವರು ಮಗಳನ್ನು ಹುಡುಕುತ್ತಾ ಸ್ಥಳಕ್ಕೆ ಬಂದಾಗ ಸಣ್ಣ ಚರಂಡಿಯೊಳಗೆ ಕಲ್ಲಿನಿಂದ ಮುಚ್ಚಿದ್ದು, ನೋವಿನಿಂದ ನರಳುತ್ತಿದ್ದ ಶಬ್ದ ಕೇಳಿಸುತ್ತಿತ್ತು. ಕೂಡಲೇ ಕಲ್ಲನ್ನು ಸರಿಸಿ ಆಕೆಯನ್ನು ಹೊರತೆಗೆದು ನಾಗ್ಪುರ್ ಮೆಡಿಕಲ್ ಕಾಲೇಜ್ ಗೆ ದಾಖಲಿಸಿದ್ದರು. ಬಾಲಕಿಯ ಗುಪ್ತಾಂಗಕ್ಕೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು 35 ವರ್ಷದ ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ ಎಂದು ಮಹೇಂದ್ರ ಸಿಂಗ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ