Breaking News

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ

Spread the love

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.

 

ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್‌ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

 

ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ