Breaking News

ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

Spread the love

ಬೆಳಗಾವಿ: ಮಹಾನಗರ ಪಾಲಿಕೆ ಬಳಿ ಇದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಮುಂದಾಗಿದ್ದ ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಬೆಳಗಾವಿ ಗಡಿ ಪ್ರವೇಶಿಸಿ ಪಾಲಿಕೆಯ ಬಳಿ ಸ್ಥಾಪಿಸಲಾಗಿದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಯತ್ನಿಸಿದ್ದ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಶಿವಸೇನೆ ಕಾರ್ಯಕರ್ತರನ್ನು ಜ.21ರಂದು ಪೊಲೀಸರು ಶಿನ್ನೊಳ್ಳಿ ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ್ದರು. ಈ ವೇಳೆ ಶಿವಸೇನೆ ಹಾಗೂ ಪೊಲೀಸರ ನಡುವೆ ವಾಗ್ವಾದ, ನೂಕಾಟ-ತಳ್ಳಾಟ ಕೂಡ ನಡೆದಿತ್ತು. ಇದೀಗ ಪೊಲೀಸರು ಶಿವಸೇನೆ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ