Breaking News

ಹಿಂದಿ ರಾಷ್ಟ್ರ ಭಾಷೆ ಅಲ್ಲ:ನಿಖಿಲ್‌ ಕುಮಾರಸ್ವಾಮಿ

Spread the love

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದನ್ನು ಶಾಲಾ ಹಂತದಿಂದಲೇ ತಿಳಿಸಬೇಕಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ನಿಯೋಜಿತ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ‘ಹಿಂದಿ ರಾಷ್ಟ್ರ ಭಾಷೆ’ ಎಂದು ಶುಕ್ರವಾರ ಹೇಳಿಕೆ ನೀಡಿದ್ದರು. ಆ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿಖಿಲ್‌ ಕುಮಾರಸ್ವಾಮಿ ಶನಿವಾರ ಟ್ವೀಟ್‌ ಮಾಡಿದ್ದಾರೆ.

‘ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು’ ಎಂದು ಅವರು ಟ್ವೀಟಿಸಿದ್ದಾರೆ.

‘ನಮ್ಮ ರಾಜ್ಯದ ಪ್ರತಿಯೊಂದು ‌ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ’ ಎಂದು ನಿಖಿಲ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ