Breaking News

ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ

Spread the love

ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.

ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲಾ ಪಂಚಾಯತಿ 2020-21 ನೇ ಸಾಲಿನ ಎಚ್‍ಡಿಪಿ ಯೋಜನೆಯ ಸುಮಾರು 10 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿ 15 ನೇ ಹಣಕಾಸಿನ ಯೋಜನೆಯ 3 ಲಕ್ಷ ರೂ.ಗಳ ಅನುದಾನದಡಿಯಲ್ಲಿ ತಪಸಿ ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಜೋಡಣೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸ್ಥಳೀಯರ ಬೇಡಿಕೆಯಂತೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕೆಲಸ ಕೈಗೆತ್ತಿಕೊಳ್ಳಲಾಗಿದೆ. ಹನಿ ನೀರು ಅಮೂಲ್ಯವಾಗಿದೆ. ಅನವಶ್ಯಕವಾಗಿ ನೀರು ಹಾಳು ಮಾಡದೇ ಸ್ಥಳೀಯರು ಕುಡಿಯುವ ನೀರಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಗೋಕಾಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಐ.ಎಮ್.ದಫೇದಾರ, ವಾಸು ಗಲಗಲಿ, ಸಿದ್ದು ಸುಳ್ಳನ್ನವರ, ಗುರುನಾಥ ದಳವಾಯಿ, ಮಾರುತಿ ಬಣಜಿಗೇರ, ಹನುಮಂತ ಪೂಜೇರ, ನ್ಯಾಯವಾದಿ ಗಲಗಲಿ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಗ್ರಾಪಂ ಸದಸ್ಯರು, ಗಣ್ಯರು, ರಾಜಕೀಯ ಮುಖಂಡರು, ಇತರರು ಇದ್ದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ