Breaking News

ಜನವರಿ 26 ದಂದು ರೈತರ ಬೃಹತ್ ಪರೇಡ್

Spread the love

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಮತ್ತೆ ಹೋರಾಟ ಮುಂದುವರೆಸಿದ್ದು, ಜನವರಿ 26 ಗಣರಾಜ್ಯೋತ್ಸವದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ಬೃಹತ್ ಪರೇಡ್ ನಡೆಸಲಿದ್ದಾರೆ.

ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ತಿಳಿಸಿದ್ದು, ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಸುತ್ತಿದ್ದಂತೆಯೇ ರಾಜ್ಯದ ರೈತರು ಬೆಂಗಳೂರಿನಲ್ಲಿ ಪರೇಡ್ ಆರಂಭಿಸಲಿದ್ದಾರೆ. ತುಮಕೂರು ರಸ್ತೆ ನೈಸ್ ಜಂಕ್ಷನ್ ನಿಂದ ಅರಂಭವಾಗಲಿರುವ ಪರೇಡ್ ಫ್ರೀಡಂ ಪಾರ್ಕ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.

ರಾಜ್ಯದ ಮೂಲೆ ಮೂಲೆಗಳಿಂದ 10 ಸಾವಿರ ವಾಹನಗಳಲ್ಲಿ ರೈತರು ಬೆಂಗಳೂರಿಗೆ ಬರಲಿದ್ದು, ಕೇಂದ್ರದ ಕೃಷಿ ನೀತಿ ವಿರುದ್ಧ ಪರೇಡ್ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ