Home / ರಾಜ್ಯ / ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ದಲ್ಲಿ

ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ದಲ್ಲಿ

Spread the love

ಹೊಸಪೇಟೆ: ಗಣರಾಜ್ಯೋತ್ಸವದ ನಿಮಿತ್ತ ರಾಜಪಥದಲ್ಲಿ ಜ. 26ರಂದು ನಡೆಯಲಿರುವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರದಲ್ಲಿ ಕನ್ನಡ ಕಡೆಗಣಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಸ್ತಬ್ಧಚಿತ್ರದ ಮುಂಭಾಗದಲ್ಲಿ ಕನ್ನಡದ ಬದಲು ಹಿಂದಿ ಭಾಷೆಯಲ್ಲಿ ಕರ್ನಾಟಕ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ, ಕನ್ನಡ ಬಾವುಟದ ಬದಲು ಕೇಸರಿ ಧ್ವಜ ಬಳಸಲಾಗಿದೆ. ಇದೇ ವಿಷಯ ಈಗ ಟೀಕೆಗೆ ಕಾರಣವಾಗಿದೆ.

ಇದೇನು ಒಕ್ಕೂಟ ವ್ಯವಸ್ಥೆಯ ದೇಶವೋ ಏನು? ಕನ್ನಡ ಬಾವುಟ ಎಲ್ಲಿ? ಗಣತಂತ್ರ ಅಂದರೆ ಒಂದು ಧರ್ಮದ ಬಾವುಟ ಹಾಕುವುದೇ? ಹೀಗೆ ಫೇಸಬುಕ್‌, ಟ್ವಿಟರ್‌ನಲ್ಲಿ ಕನ್ನಡಿಗರು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ