ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು.
ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಅಂಚೆ ಕಚೇರಿಗೆ ಫಲಾನುಭವಿಗಳು ಅಲೆಯುವುದನ್ನು ತಪ್ಪಿಸಲು ನೇರವಾಗಿ ಫಲಾನುಭವಿಯ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ನೇರವಾಗಿ ಪಿಂಚಣಿ ಹಣ ಜಮಾ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.