Breaking News

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

Spread the love

ಕೋಲಾರ : ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ಶಾಲಾ ವಾಹನ ಪಲ್ಟಿ ಆಗಿದೆ. ಶಾಲಾ ವಾಹನ ಪಲ್ಟಿಯಾಗಿದ್ದರಿಂದ ಅದರಲ್ಲಿದ್ದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ ಇಂದು ಬೆಳಿಗ್ಗೆ ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ವಾಹನ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ವಾಹನದಲ್ಲಿದ್ದಂತ 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.

ಶಾಲಾ ವಾಹನ ಪಲ್ಟಿಯಾಗಿ ಗಾಯಗೊಂಡಿರುವಂತ 15ಕ್ಕೂ ಹೆಚ್ಚು ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮುಳುಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾವೇರಿ ಹುಕ್ಕೇರಿಮಠದ ಜಾತ್ರೆಗೆ ದಿನಗಣನೆ

Spread the loveಹಾವೇರಿ : ಜಿಲ್ಲೆಯ ಹುಕ್ಕೇರಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೇ 25 ರಿಂದ ಜನವರಿ ಎರಡರವರೆಗೆ ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ