Breaking News

ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಮೂಲ ಪತ್ತೆ, ಮತ್ತಿಬ್ಬರು ಅರೆಸ್ಟ್

Spread the love

ಬೆಂಗಳೂರು,ಜ.25- ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮಹತ್ವದ ಪ್ರಗತಿ ಸಾಸಿದ್ದು, ಸೋರಿಕೆಯ ಮೂಲವನ್ನು ಪತ್ತೆಹಚ್ಚಿರುವ ಸಿಸಿಬಿ ಪೊಲೀಸರು ಕರ್ನಾಟಕ ಲೋಕಸೇವಾ ಆಯೋಗದ ಇಬ್ಬರು ಸಿಬ್ಬಂದಿಗಳನ್ನು ಬಂಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿರುವ ರಮೇಶ್, ಪರೀಕ್ಷಾ ವಿಭಾಗದಲ್ಲಿ ಶೀಘ್ರ ಲಿಫಿಗಾರರಾಗಿರುವ ಸನಾಬೇಡಿ ಅವರನ್ನು ಬಂಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸನಾಬೇಡಿ ಪರೀಕ್ಷಾ ವಿಭಾಗದ ನಿಯಂತ್ರಕರಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ ರಮೇಶ್‍ಗೆ ನೀಡಿದ್ದಾರೆ. ಈತ ಚಂದ್ರು ಸೇರಿದಂತೆ ಇತರ ಆರೋಪಿಗಳಿಗೆ ಹಂಚಿಕೆ ಮಾಡಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆಸಿರುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಜಾಲದ ಬೆನ್ನು ಹತ್ತಿರುವ ಸಿಸಿಬಿ ಪೊಲೀಸರು ಈವರೆಗೂ 16 ಮಂದಿಯನ್ನು ಬಂಸಿದ್ದಾರೆ.


Spread the love

About Laxminews 24x7

Check Also

ಸಕ್ರೆಬೈಲು ಆನೆ ಬಾಲಣ್ಣನ ಕಿವಿ ಕತ್ತರಿಸಿದ ವೈದ್ಯರ ತಂಡ: ಚಿಕಿತ್ಸೆ ಕುರಿತು ಡಿಎಫ್ಒ ಹೇಳಿದ್ದಿಷ್ಟು

Spread the love ಶಿವಮೊಗ್ಗ: ಸಕ್ರೆಬೈಲು ಆನೆ‌ ಬಿಡಾರದ ಬಾಲಣ್ಣ ಎಂಬ ಹೆಸರಿನ ಸಾಕಾನೆಯ ಬಲ ಕಿವಿಯನ್ನು ಬೆಂಗಳೂರಿನ ವೈದ್ಯರ ತಂಡವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ