Breaking News

ಕೆಂಪುಕೋಟೆಯ ಸಮೀಪ ತಲುಪಿದ ರೈತರ ಟ್ರ್ಯಾಕ್ಟರ್‌ ರ‍್ಯಾಲಿ

Spread the love

ಹೊಸದಿಲ್ಲಿ,ಜ.26: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂಬ ನಿಟ್ಟಿನಲ್ಲಿ ರೈತರು ಗಣರಾಜ್ಯೋತ್ಸವ ದಿನವಾದ ಇಂದು ರಾಷ್ಟ್ರ ರಾಜಧಾನಿ ದಿಲ್ಲಿಗೆ ಟ್ರ್ಯಾಕ್ಟರ್‌ ರ‍್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಪರಿಸ್ಥಿತಿಯು ಕೈ ಮೀರುವ ಹಂತದಲ್ಲಿದ್ದು, ಪೊಲೀಸರು ನಿರಂತರ ಅಶ್ರುವಾಯು ಸಿಡಿಸುತ್ತಿದ್ದಾರೆ ಹಾಗೂ ಲಾಠಿ ಚಾರ್ಜ್‌ ಮಾಡುತ್ತಿದ್ದಾರೆ. ಈ ನಡುವೆ ರೈತರು ಭಾರತೀಯ ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಬಳಿ ಜಮಾವಣೆಗೊಂಡು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತಿದ್ದಾರೆ ಎಂದುವರದಿ ಮಾಡಿದೆ.

ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಬಳಿ ಇದೀಗ ರೈತರು ಜಮಾವಣೆಗೊಂಡಿದ್ದು, ತಮ್ಮ ಟ್ರ್ಯಾಕ್ಟರ್‌ ಗಳ ಮೂಲಕ ಕೆಂಪುಕೋಟೆ ಬಳಿ ತಲುಪಿದ್ದು, ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತಿದ್ದಾರೆ. ಇನ್ನು ಕೇಂದ್ರ ಸಂಸತ್‌ ಭವನದಿಂದ ಕೇವಲ 5ಕಿ.ಮೀ ದೂರದಲ್ಲಿ ರೈತರು ಜಮಾವಣೆಗೊಂಡಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ