ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ ಕೈ ಬಿಡಬೇಕು ಎಂದ :H.D.K.

Spread the love

ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ರೈತರು ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ನಡೆಯುವ ಗಣರಾಜ್ಯೋತ್ಸವ ದಿನದಂದು ದೇಶವ್ಯಾಪಿ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿದ್ದರಾಗಿದ್ದಾರೆ. ಇದೇ ವಿಷಯವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ ಕೈಬಿಟ್ಟು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಮಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ. ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Spread the loveಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ದುರಂತ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಅಜಿತ್ ಪವಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ