Breaking News

ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್‌ ಇದೇ: ಬಿ.ಸಿ ಪಾಟೀಲ್‌

Spread the love

ಕೊಪ್ಪಳ: ನವದೆಹಲಿಯ ಕೆಂಪುಕೋಟೆಗೆ ರೈತರು ನುಗ್ಗಿ ರೈತರು ಬೇರೆ ಧ್ವಜವೊಂದು ಹಾರಿಸಿದ್ದಾರೆ. ಈ ನಡುವೆ ರಾಜ್ಯದಲ್ಲೂ ಕೂಡ ರೈತರ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇವರಲ್ಲದರ ನಡುವೆ ಸಚಿವ ಬಿ.ಸಿ ಪಾಟೀಲ್‌ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್‌ ಇದೇ ಅನ್ನುವುದರ ಮೂಲಕ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಿರೋದು ಭಯೋತ್ಪದಕರು, ಇವರಿಗೆಲ್ಲ ಬೇರೆ ಬೇರೆ ದೇಶದ ಬೆಂಬಲವಿದ್ದು, ಕಾಂಗ್ರೆಸ್‌ನವರು ಸಾಥ್ ನೀಡುತ್ತಿದ್ದಾರೆ. ಸ್ವಾತಂತ್ರ್ಯ ಚಳುವಳಿಯ ವೇಳೆಯಲ್ಲಿ ಗಾಂಧಿಜೀಯವರು ಕೂಡ ಶಾಂತಿಯಾಗಿ ತಮ್ಮ ಹೋರಾಟವನ್ನು ನಡೆಸಿದರು. ಕೆಂಪು ಧ್ವಜವನ್ನು ಇಳಿಸಿದ್ದಾರೆ ಅಂತ ಕಿಡಿಕಾರಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ