Breaking News

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

Spread the love

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂಥಲಮನ್ನ ಪಟ್ಟಣದಲ್ಲಿ ಮಹಿಳೆಯೊಬ್ಬಳು ಮೊದಲ ಪ್ರಸವದಲ್ಲೇ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಪಲಕ್ಕಾಡ್​ನ ಛಲಾವರ ಮೂಲದ ದಂಪತಿ ಮುಸ್ತಫಾ ಮತ್ತು ಮುಬೀನಾ ಕಳೆದ ವರ್ಷ ಮದುವೆಯಾಗಿದ್ದರು. ಗರ್ಭಾವಸ್ಥೆಯ ಆರಂಭದಲ್ಲೇ ಮುಬೀನಾ ನಾಲ್ಕು ಮಕ್ಕಳ ತಾಯಿ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಪೆರಿಂಥಲ್​ಮನ್ನದ ಮೌಲಾನಾ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ. ಅಬ್ದುಲ್​ ವಾಹಾಬ್​ ಅವರ ಬಳಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು.

ಗರ್ಭಾವತಿಯಾಗಿ 8 ತಿಂಗಳು ಕಳೆದ ಬಳಿಕ ಸಿ-ಸೆಕ್ಷನ್​ ಸರ್ಜರಿ ಮೂಲಕ ನಾಲ್ಕು ಮಕ್ಕಳಿಗೆ ಮಬೀನಾ ಜನ್ಮ ನೀಡಿದ್ದಾರೆ. ಪ್ರತಿ ಮಗು 1100 ರಿಂದ 1600 ಗ್ರಾಂ ತೂಗುತ್ತಿದ್ದೆ. ಸದ್ಯ ಮಕ್ಕಳಿಗೆ ನಿಯೋ ಬ್ಲೆಸ್ ವಿಭಾಗದಲ್ಲಿ ವಿಶೇಷ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಎಲ್ಲ ಮಕ್ಕಳು ಸಹ ಆರೋಗ್ಯವಾಗಿದ್ದಾರೆಂದು ನಿಯೋ ಬ್ಲೆಸ್​ ವಿಭಾಗದ ಉಸ್ತುವಾರಿ ಡಾ. ಜಯಚಂದ್ರ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ