ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಶಾಸಕ ಅನಿಲ ಬೆನಕೆ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲಿ ಅಧಿಕಾರಿ, ಸಿಬ್ಬಂದಿಗೆ ಊಟ, ರೋಗಿಗಳಿಗೆ ಔಷಧ, ಆಸ್ಪತ್ರೆಗಳಿಗೆ ಮೆಡಿಕಲ್ ಉಪಕರಣಗಳನ್ನು ಪೂರೈಸಿದ ವರ್ತಕರಿಗೆ ಇನ್ನೂ ಬಿಲ್ ಪಾವತಿಯಾಗಿಲ್ಲ. ಕೂಡಲೇ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಉತ್ತರಿಸಿ, ಹೋಟೆಲ್ ಹಾಗೂ ಮೆಡಿಕಲ್ ಇಕ್ವಿಪ್‍ಮೆಂಟ್ ಪೂರೈಸಿದವರಿಗೆ ಬಿಲ್ ಪಾವತಿಸಲು ಜಿಲ್ಲಾಡಳಿತದಿಂದ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸಂಬಂಧಿಸಿದವರನ್ನು ವಿಚಾರಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ಕೋವಿಡ್ ಸಂದರ್ಭದ ಸಮಸ್ಯೆಗಳ ಬಗ್ಗೆ ಶಾಸಕ ಮಹೇಶ ಕುಮಟಳ್ಳಿ, ಸಚಿವ ರಮೇಶ ಜಾರಕಿಹೊಳಿ ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡ ಕಾರ್ಯಚಟುವಟಿಕೆಗಳ ಬಗ್ಗೆ ಸಭೆಗೆ ವಿವರ ನೀಡಿದರು.
ಈ ವೇಳೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಮತ್ತಿತರರು ಪಾಲ್ಗೊಂಡಿದ್ದರು.
Laxmi News 24×7