ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ.
ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.
ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ ಬಗ್ಗೆಯೇ ಮಹಾರಾಷ್ಟ್ರ ಸಿಎಂ ಹೆಚ್ಚೆಚ್ಚು ಮಾತನಾಡುವುದು. ಅವರ ಹೇಳಿಕೆ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದು ಬೇಡ ಎಂದರು.
ಬೆಳಗಾವಿ ಯಾವಾಗಲೂ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದರು.
Laxmi News 24×7