ಬೆಂಗಳೂರು:ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜ.28ರಿಂದ ಫೆ. 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ, ವಿಧಾನಸೌಧ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಇದರಿಂದ ಅಧಿವೇಶದ ಕಾರ್ಯಕಲಾಪಗಳಿಗೆ ತೊಂದರೆ ಆಗಬಹುದು. ಸುಗಮ ಸಂಚಾರ ವ್ಯವಸ್ಥೆಗೂ ಅಡ್ಡಿಉಂಟಾಗಲಿದೆ. ಈ ನಿಟ್ಟಿನಲ್ಲಿ ಜ.28ರಿಂದ ಫೆ.5ರವರೆಗೆ ಅಧಿವೇಶನಗಳು ನಡೆಯುವ ದಿನಗಳಂದು ಬೆಳಿಗ್ಗೆ ಆರರಿಂದ ರಾತ್ರಿ ಹನ್ನೆರಡು ಗಂಟೆಯವರೆಗೆ ವಿಧಾನಸೌಧದ 2 ಕಿ.ಮೀ ವ್ಯಾಪ್ತಿಗೆ ಅನ್ವಯ ಆಗುವಂತೆ ನಿಷೇಧಾಜ್ಞೆ ಹೇರಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
 Laxmi News 24×7
Laxmi News 24×7
				 
		 
						
					