Breaking News

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರೈತರ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ತೆಂಗು ಬೆಳೆಯುವ ರೈತರಿಗೆ ಎಂಎಸ್ ಪಿ ಕೊಡುಗೆ ನೀಡಲಾಗಿದೆ ಅಂತ ತಿಳಿದು ಬಂದಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮಾಧ್ಯಮಗಳಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಕೊಬ್ಬರಿ ಬೆಳೆಗಾರರ ಪರವಾಗಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಅವರು ಕೊಬ್ಬರಿಯ MSP ಯನ್ನು ಹೆಚ್ಚಿಸಲಾಗಿದೆ. ಕೊಬ್ಬರಿ ಎಂಎಸ್ ಪಿ ಯನ್ನು ಪ್ರತಿ ಕ್ವಿಂಟಾಲ್ ಗೆ 375 ರೂ ಹೆಚ್ಚಿಸಲಾಗಿದ್ದು, ಈ ಹಿಂದೆ ಪ್ರತಿ ಕ್ವಿಂಟಾಲ್ ಗೆ 9960 ರೂ.ಗಳಿದ್ದ ಈ ಬೆಲೆ ಈಗ 10335 ರೂ.ಗೆ ಏರಿಕೆಯಾಗಿದೆ ಅಂತ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡುತ್ತ, ನಾವು ಉತ್ಪಾದನಾ ವೆಚ್ಚಕ್ಕಿಂತ 52% ಮತ್ತು 55% ಹೆಚ್ಚು ನೀಡುತ್ತಿದ್ದೇವೆ. ಇದು ತೆಂಗು ಕೃಷಿಯಲ್ಲಿ ತೊಡಗಿರುವ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ ಮತ್ತು 12 ಕರಾವಳಿ ರಾಜ್ಯಗಳ ರೈತರ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ರೈತರಿಗೆ ಅನುಕೂಲ ವಾಗಲೆಂದು ಕೇಂದ್ರ ಸರ್ಕಾರ ಕೈಗೊಂಡ ಹಲವು ನಿರ್ಧಾರಗಳಲ್ಲಿ ಇದೂ ಒಂದು ಎಂದು ಅವರು ಹೇಳಿದರು. ಸರ್ಕಾರ ದರ ಹೆಚ್ಚಿಸಿದಾಗ ಮಾರುಕಟ್ಟೆಯೂ ಹೆಚ್ಚು ಹಣ ಪಾವತಿಸುತ್ತದೆ ಎಂದು ಜಾವಡೇಕರ್ ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ