Breaking News

ಉದ್ಧವ್ ಠಾಕ್ರೆ ಒಬ್ಬ ‘ಮಹಾ’ ಹುಚ್ಚ : ಸಾ.ರಾ.ಗೋವಿಂದು

Spread the love

ಬೆಂಗಳೂರು, ಜ.28- ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಬ್ಬ ಅರೆಹುಚ್ಚ ಎಂದುಕೊಂಡಿದ್ದೆವು. ಪೂರ್ತಿ ಹುಚ್ಚ ಎಂಬುದು ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಕಿಡಿಕಾರಿದ್ದಾರೆ.

ಮರಾಠಿ ಮಾತನಾಡುವವರು ಇರುವ ಕರ್ನಾಟಕದ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂಬುದಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ರಾಜಕೀಯ ಅಸ್ತಿತ್ವಕ್ಕಾಗಿ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದರು.

ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎನ್ನುವುದಾದರೆ ನಾವು ಒಂದು ಹೆಜ್ಜೆ ಮುಂದೆ ಹೋಗಿ ಮುಂಬೈ, ಸೊಲ್ಲಾಪುರವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹ ಮಾಡುತ್ತೇವೆ. ಮಹಾಜನ್ ವರದಿಯನ್ನು ಎರಡೂ ರಾಜ್ಯಗಳು ಒಪ್ಪಿವೆ. ಬೆಳಗಾವಿ ನಮ್ಮದು ಎಂದು ಈಗಾಗಲೇ ಘೋಷಣೆಯಾಗಿದೆ. ಒಂದಿಂಚೂ ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಡಲು ಸಾಧ್ಯವಿಲ್ಲ. ಗಡಿ ವಿವಾದ ನ್ಯಾಯಾಲಯದಲ್ಲಿದೆ.

ಮಹಾರಾಷ್ಟ್ರದವರೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗಡಿ ಬಗ್ಗೆ ತಕರಾರು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿರುವವರು ಅನಗತ್ಯ ಹೇಳಿಕೆಗಳನ್ನು ನೀಡಿ ನ್ಯಾಯಾಂಗ ನಿಂದನೆ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ