ಬೆಂಗಳೂರು, ಜ.28- ವಿಧಾನಪರಿಷತ್‍ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ 9.30ಕ್ಕೆ ಪಕ್ಷದ ಮುಖಂಡರೊಂದಿಗೆ ಆಗಮಿಸಿದ ಪ್ರಾಣೇಶ್ ಅವರು ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ ದಾರಿ ಸುಗಮವಾಗಿದೆ. ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ತೀರ್ಮಾನಿಸಿರುವುದರಿಂದ ಬಿಜೆಪಿಗೆ ಉಪಸಭಾಪತಿ ಸ್ಥಾನ ದಕ್ಕಲಿದೆ.
