Breaking News

ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಸವರಾಜ ಹೊರಟ್ಟಿ

Spread the love

ಬೆಂಗಳೂರು, ಜ.28- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಬಸವರಾಜ ಹೊರಟ್ಟಿ ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ ಉಪಸ್ಥಿತರಿದ್ದರು.

ಬಿಜೆಪಿ ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಪರಿಷತ್‍ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನ ಅಲಂಕರಿಸಲಿದ್ದಾರೆ. ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪಕ್ಷದ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಗಿತ್ತು. ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರಿಗೆ ಹುದ್ದೆ ನೀಡುವ ಸಂಬಂಧ ಸಭೆಯಲ್ಲಿ ಸದಸ್ಯರು ಸರ್ವಾನುಮತದ ಸಹಮತ ವ್ಯಕ್ತಪಡಿಸಿದ್ದಾರೆ.

ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಲು ದೇವೇಗೌಡರು ಸಹ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹೊರಟ್ಟಿ ಅವರು ಬೆಳಗ್ಗೆ ಗೌಡರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ