Breaking News

ನನ್ನ ಮನೆಗೆ ಬೆಂಕಿ ಹಾಕಿದ್ರೂ ಸುಮ್ಮನಿದ್ರಿ: ಅಖಂಡ ಆಕ್ರೋಶ

Spread the love

ಬೆಂಗಳೂರು: ‘ಡಿ.ಜಿ.ಹಳ್ಳಿ ಗಲಭೆ ಸಂದರ್ಭದಲ್ಲಿ ನನ್ನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದರೂ ನನ್ನ ಪರವಾಗಿ ಒಂದೂ ಹೇಳಿಕೆ ನೀಡಲಿಲ್ಲ. ಪ್ರತಿಭಟನೆ ಮಾಡಲಿಲ್ಲ. ಆದರೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಪರವಾಗಿ ಹೇಳಿಕೆ ಮತ್ತು ಹೋರಾಟ ನಡೆಸುತ್ತಿದ್ದೀರಿ’ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ.

ಇತ್ತೀಚೆಗೆ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಶಾಸಕಿ ಸೌಮ್ಯ ರೆಡ್ಡಿ ಮಹಿಳಾ ಪೊಲೀಸ್‌ವೊಬ್ಬರಿಗೆ ಹೊಡೆದಿದ್ದು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಪೊಲೀಸರೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸೌಮ್ಯ ದೂರು ನೀಡಿದ್ದರು. ಶಾಸಕಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರಿಂದ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ವಿಧಾನಸಭೆಯಲ್ಲೂ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ