Breaking News

ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ

Spread the love

ಬೆಳಗಾವಿ: ಗಡಿ ವಿಚಾರವಾಗಿ ಮಹಾರಾಷ್ಟ್ರದ ಪುಂಡಾಟ ಮುಂದುವರೆದಿದ್ದು, ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ ಮೆರೆದಿದ್ದಾರೆ.

ಬೆಳಗಾವಿಯಿಂದ ಪುಣೆ ಹೋಗುವ ಬಸ್ ಗಳ ಮೇಲೆ‌ ಕಿಡಿಗೇಡಿಗಳು ಪೋಸ್ಟರಗಳನ್ನು ಅಂಟಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿ ಸಂಯುಕ್ತ ಮಹಾರಾಷ್ಟ್ರ ಆಗವುದು ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ ಪುಣೆ ಹೆಸರಿನಲ್ಲಿ ಈ ಪೋಸ್ಟರಗಳನ್ನು ಬರೆಯಲಾಗಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ಕಿಡಿಗೇಡಿಗಳು ಗಡಿ ವಿವಾದ ಬೆಂಕಿಗೆ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತ

Spread the loveನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು (ಸೋಮವಾರ) ಮೊದಲ ಬಾರಿಗೆ ಸಂಸತ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ